12th Pass : ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ 2024 : KEA KLA Recruitment 2024

KEA KLA ನೇಮಕಾತಿ 2024 : ಕರ್ನಾಟಕ ವಿಧಾನಸಭೆ 28 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್, ಕಂಪ್ಯೂಟರ್ ಆಪರೇಟರ್, ಸಹಾಯಕರು, ಕಿರಿಯ ಸಹಾಯಕರು, ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, KEA KLA ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, KEA KLA Recruitment 2024.

KEA KLA ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ cetonline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, KEA KLA ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. KEA KLA Notification 2024.

KEA Karnataka Legislative Assembly Recruitment 2024

ಸಂಸ್ಥೆಯ ಹೆಸರು : KEA ಕರ್ನಾಟಕ ವಿಧಾನಸಭೆ
ಹುದ್ದೆಗಳ ಸಂಖ್ಯೆ : 28
ಪೋಸ್ಟ್ ಹೆಸರು : ಜೂನಿಯರ್ ಪ್ರೋಗ್ರಾಮರ್
ಮಾಸಿಕ ವೇತನ : ರೂ. 21400-97100/-
ಉದ್ಯೋಗ ಸ್ಥಳ : ಕರ್ನಾಟಕ
ಪ್ರಾರಂಭ ದಿನಾಂಕ : 24/03/2024
ಕೊನೆಯ ದಿನಾಂಕ : 23/04/2024
Official Website : cetonline.karnataka.gov.in

Total Post of KEA KLA Vacancy 2024 : 28

ಹುದ್ದೆ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
ಸೀನಿಯರ್ ಪ್ರೋಗ್ರಾಮರ್02
ಜೂನಿಯರ್ ಪ್ರೋಗ್ರಾಮರ್02
ಜೂನಿಯರ್ ಕನ್ಸೋಲ್ ಆಪರೇಟರ್04
ಕಂಪ್ಯೂಟರ್ ಆಪರೇಟರ್04
ಸಹಾಯಕರು03
ಕಿರಿಯ ಸಹಾಯಕರು08
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು05

ಶೈಕ್ಷಣಿಕ ವಿವರಗಳು :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪಿಯುಸಿ, ಪದವಿಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.

ಹುದ್ದೆ ಹೆಸರುಹುದ್ದೆಗಳ ಅರ್ಹತೆ
ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್,
ಜೂನಿಯರ್ ಕನ್ಸೋಲ್ ಆಪರೇಟರ್
ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು
ಕಂಪ್ಯೂಟರ್ ಆಪರೇಟರ್ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು
ಸಹಾಯಕರುಕಾನೂನು ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು
ಕಿರಿಯ ಸಹಾಯಕರುಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರುಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು

ಅಭ್ಯರ್ಥಿಯ ವಯೋಮಿತಿ :

ಕರ್ನಾಟಕ ವಿಧಾನಸಭೆ ನಲ್ಲಿ ಖಾಲಿ ಇರುವಂತಹ 28 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ

  • ಕನಿಷ್ಠ ವಯಸ್ಸು : 18 Years
  • ಗರಿಷ್ಠ ವಯಸ್ಸು : 35 Years

ವಯೋಮಿತಿ ಸಡಿಲಿಕೆ :

ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ : 05 ವರ್ಷಗಳು
  • Cat-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು

ಸಂಬಳದ ವಿವರಗಳು (ವೇತನ) :

ಕರ್ನಾಟಕ ವಿಧಾನಸಭೆ ನಲ್ಲಿ ಖಾಲಿ ಇರುವಂತಹ ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್, ಕಂಪ್ಯೂಟರ್ ಆಪರೇಟರ್, ಸಹಾಯಕರು, ಕಿರಿಯ ಸಹಾಯಕರು, ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ

ರೂ. 21400-97100/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು :

ಕರ್ನಾಟಕ ವಿಧಾನಸಭೆ ನಲ್ಲಿ ಖಾಲಿ ಇರುವಂತಹ 28 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ. 750/-
  • ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 500/-
  • ವಿಕಲಚೇತನ ಅಭ್ಯರ್ಥಿಗಳು : ರೂ. 250/-

ಆಯ್ಕೆ ಪ್ರಕ್ರಿಯೆ ವಿವರಗಳು :

  • ಸ್ಪರ್ಧಾತ್ಮಕ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಕರ್ನಾಟಕ ವಿಧಾನಸಭೆ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 24 ಮಾರ್ಚ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಏಪ್ರಿಲ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/04/2024

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :

ಅಧಿಸೂಚನೆ PDF : Download
ಅಪ್ಲೈ ಆನ್‌ಲೈನ್‌ : Apply Online
Official Website : cetonline.karnataka.gov.in

Leave a Comment