ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2024 | Mangalore Catholic Cooperative Bank Recruitment 2024

MCC Bank ನೇಮಕಾತಿ 2024 : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ 50 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಹಿರಿಯ ಪ್ರಬಂಧಕರು, ಶಾಖಾ ಪರಿವೀಕ್ಷಕರು, ವಸೂಲಾತಿ ಅಧಿಕಾರಿ, ಶಾಖಾ ವ್ಯವಸ್ಥಾಪಕರು, ಸುಪರ್‌ವೈಸ‌ರ್, ಮುಖ್ಯ ಅಕೌಂಟೆಂಟ್, ಅಕೌಂಟೆಂಟ್, ಡೇಟಾಬೇಸ್ ಅಡ್ಮಿನಿಸ್ಟ್ರೇಟ‌ರ್, ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ಕಿರಿಯ ಸಹಾಯಕ, ಅಟೆಂಡರ್/ಡ್ರೈವರ್ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, MCC Bank ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, MCC Bank Recruitment 2024.

MCC Bank ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.mccbank.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. MCC Bank Notification 2024.

Mangalore Catholic Cooperative Bank Recruitment 2024

ಸಂಸ್ಥೆಯ ಹೆಸರು : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್
ಹುದ್ದೆಗಳ ಸಂಖ್ಯೆ : 50
ಪೋಸ್ಟ್ ಹೆಸರು : ವಿವಿಧ ಹುದ್ದೆ
ಮಾಸಿಕ ವೇತನ : ರೂ. 16000-51300/-
ಉದ್ಯೋಗ ಸ್ಥಳ : ಕರ್ನಾಟಕ
ಪ್ರಾರಂಭ ದಿನಾಂಕ : 12/03/2024
ಕೊನೆಯ ದಿನಾಂಕ : 26/03/2024
Official Website : www.mccbank.in

Total Post of MCC Bank Vacancy 2024 : 50 

ಹುದ್ದೆ ಹೆಸರು ಒಟ್ಟು ಹುದ್ದೆಗಳ ಸಂಖ್ಯೆ
ಹಿರಿಯ ಪ್ರಬಂಧಕರು02
ಶಾಖಾ ಪರಿವೀಕ್ಷಕರು01
ವಸೂಲಾತಿ ಅಧಿಕಾರಿ01
ಶಾಖಾ ವ್ಯವಸ್ಥಾಪಕರು02
ಸುಪರ್‌ವೈಸ‌ರ್01
ಮುಖ್ಯ ಅಕೌಂಟೆಂಟ್01
ಅಕೌಂಟೆಂಟ್05
ಡೇಟಾಬೇಸ್ ಅಡ್ಮಿನಿಸ್ಟ್ರೇಟ‌ರ್02
ಕಿರಿಯ ಅಧಿಕಾರಿ10
ಹಿರಿಯ ಸಹಾಯಕ08
ಕಿರಿಯ ಸಹಾಯಕ13
ಅಟೆಂಡರ್/ಡ್ರೈವರ್04

ಶೈಕ್ಷಣಿಕ ವಿವರಗಳು :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಸ್.ಎಸ್.ಎಲ್.ಸಿ, ಪದವಿಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.

ಹುದ್ದೆ ಹೆಸರುಹುದ್ದೆಗಳ ಅರ್ಹತೆ
ಹಿರಿಯ ಪ್ರಬಂಧಕರು, ಶಾಖಾ ಪರಿವೀಕ್ಷಕರು, ವಸೂಲಾತಿ ಅಧಿಕಾರಿ, ಶಾಖಾ ವ್ಯವಸ್ಥಾಪಕರು, ಸುಪರ್‌ವೈಸ‌ರ್ಯಾವುದೇ ವಿಷಯದಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು
ಮುಖ್ಯ ಅಕೌಂಟೆಂಟ್ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು
ಅಕೌಂಟೆಂಟ್ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಟ್ಯಾಲಿ ಕೋರ್ಸ ತೇರ್ಗಡೆಯಾದ ಪ್ರಮಾಣಪತ್ರ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು
ಡೇಟಾಬೇಸ್ ಅಡ್ಮಿನಿಸ್ಟ್ರೇಟ‌ರ್ಗಣಕ ವಿಜ್ಞಾನದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು
ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ಕಿರಿಯ ಸಹಾಯಕಯಾವುದೇ ಪದವಿ ಹಾಗೂ ಕಂಪ್ಯೂಟರಿನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು
ಅಟೆಂಡರ್/ಡ್ರೈವರ್ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು. ಚಾಲನಾ ಪರವಾನಿಗೆ ಕಡ್ಡಾಯ

ಅಭ್ಯರ್ಥಿಯ ವಯೋಮಿತಿ :

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 50 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷಗಳಿಗೆ ನಿಗದಿಪಡಿಸಲಾಗಿದೆ

  • ಕನಿಷ್ಠ ವಯಸ್ಸು : 18 Years
  • ಗರಿಷ್ಠ ವಯಸ್ಸು : 40 Years

ವಯೋಮಿತಿ ಸಡಿಲಿಕೆ :

ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ : 05 ವರ್ಷಗಳು
  • Cat-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
  • PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳು

ಸಂಬಳದ ವಿವರಗಳು (ವೇತನ) :

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ

ರೂ. 16000-51300/ ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು :

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 50 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ

  • ಅಟೆಂಡರ್/ ಡ್ರೈವರ್ ಹುದ್ದೆಗೆ ಪ.ಜಾತಿ/ ಪ.ಪಂ./ ಪ್ರ1ರ ಅಭ್ಯರ್ಥಿಗಳು : ರೂ. 500
  • ಉಳಿದ ಹುದ್ದೆಗಳಿಗೆ : ರೂ. 1000

ಆಯ್ಕೆ ಪ್ರಕ್ರಿಯೆ ವಿವರಗಳು :

  • ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 12 ಮಾರ್ಚ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಮಾರ್ಚ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/03/2024

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗಳು ಅರ್ಜಿ ಶುಲ್ಕದ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :

ಅಧಿಸೂಚನೆ PDF : Download
Official Website : www.mccbank.in

Leave a Comment